
ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಶಿವರಾಜ್ ಕುಮಾರ್ ಭಾಗಿಯಾಗಲಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮೇಕೆದಾಟು ಸಂಗಮದಿಂದ ನಾಳೆಯಿಂದ ಪಾದಯಾತ್ರೆ ಆರಂಭವಾಗಲಿದ್ದು, ನಾಳೆ ಬೆಳಗ್ಗೆ ಶಿವರಾಜ್ ಕುಮಾರ್ ಅವರು ಮೇಕೆದಾಟು ಪಾದಯಾತ್ರೆಯನ್ನು ಉದ್ಘಾಟಿಸಲಿದ್ದಾರೆ.
ಪಕ್ಷಾತೀತವಾಗಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆಗೆ ಚಿತ್ರೋದ್ಯಮ ಬೆಂಬಲ ನೀಡಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜೈರಾಜ್ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ, ಹಿರಿಯ ಕಲಾವಿದರಾದ ಮುಖ್ಯಮಂತ್ರಿ ಚಂದ್ರು, ಉಮಾಶ್ರೀ, ಜಯಮಾಲಾ ಅವರು ಕೂಡ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.