ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರು ಹೇಳಿಕೆ ನೀಡಿದ್ದು ರಾಜ್ಯ ಪೊಲೀಸ್ ಇಲಾಖೆಯಿಂದ ಭದ್ರತೆ ಕಲ್ಪಿಸಲಾಗಿದೆ.
ಶಿವರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಭದ್ರತೆ ಕಲ್ಪಿಸಿದ್ದು, ಭದ್ರತಾ ಸಿಬ್ಬಂದಿಯನ್ನು ಅವರ ಮನೆಗೂ ನಿಯೋಜಿಸಲಾಗಿದೆ. ನಾಲ್ವರು ಪೊಲೀಸರು ಹಾಗೂ ಗನ್ ಮ್ಯಾನ್ ಗಳು ಎರಡು ಪಾಳಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.