
ಬೆಂಗಳೂರು: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಇಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ.
ಲಾಕ್ಡೌನ್ ಜಾರಿಯಾಗಿದ್ದರಿಂದ ಸಿನಿಮಾ ಕ್ಷೇತ್ರಕ್ಕೆ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಕೋರಿ ಇಂದು ಮುಖ್ಯಮಂತ್ರಿ ಭೇಟಿಗೆ ಚಿತ್ರರಂಗದ ಗಣ್ಯರು ನಿರ್ಧರಿಸಿದ್ದರು. ಆದರೆ, ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗಲಿ ಆಸ್ಪತ್ರೆಗೆ ದಾಖಲಾಗಿದ್ದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಲಿದ್ದಾರೆ.
ಅಶ್ವಥ್ ನಾರಾಯಣ ಅವರ ಸರ್ಕಾರಿ ನಿವಾಸದಲ್ಲಿ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಡಿಸಿಎಂ ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ.