ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ.
ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದ್ದು ಕೋವಿಡ್ ಮಾರ್ಗಸೂಚಿ ಪಾಲಿಸಿ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.
ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರ ಸ್ಥಳಾಂತರ ಮಾಡಿ ಬೆಳಗ್ಗೆ 7.30 ರಿಂದ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಹೇಳಲಾಗಿದೆ.