alex Certify BREAKING NEWS: ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ಶಿವರಾಂ

ಬೆಂಗಳೂರು: ನಿನ್ನೆ ನಿಧನರಾಗಿದ್ದ ಹಿರಿಯ ನಟ ಶಿವಾರಾಂ ಅಂತ್ಯಕ್ರಿಯೆ ಇಂದು ಬನಶಂಕರಿ ಚಿತಾಗಾರದಲ್ಲಿ ಪೊಲೀಸ್ ಗೌರವದೊಂದಿಗೆ ನೆರವೇರಿತು.

ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚಿತ್ರರಂಗದ ಗಣ್ಯರು, ಕಲಾವಿದರು, ಅಭಿಮಾನಿಗಳು ಅಂತಿಮ ದರ್ಶನ ಪಡೆದರು.

ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಪಾರ್ಥಿವ ಶರೀರಕ್ಕೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಅಂತಿಮ ವಿಧಿವಿಧಾನ ನೆರವೇರಿಸಿದ ಬಳಿಕ ಪೊಲೀಸರಿಂದ ಕುಶಾಲ ತೋಪು ಹಾರಿಸಿ ಗೌರವ ನಮನ ಸಲ್ಲಿಸಿದ್ದು, ಸಚಿವ ಆರ್. ಅಶೋಕ್ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಅಯ್ಯಪ್ಪ ಸ್ವಾಮಿ ಭಕ್ತರು ಅಯ್ಯಪ್ಪ ಸ್ವಾಮಿ ಗೀತೆ ಸ್ತುತಿಸಿದ್ದಾರೆ. ಧಾರ್ಮಿಕ ವಿಧಿ ನೆರವೇರಿದ ಬಳಿಕ ಪುತ್ರರಾದ ರವಿಶಂಕರ್, ಲಕ್ಷ್ಮೀಶ ಅವರು ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...