ಕೊಲ್ಕತ್ತಾ: ಖ್ಯಾತ ಗಾಯಕ ಕೃಷ್ಣಕುಮಾರ್(KK) ಹೃದಯಸ್ತಂಭನದಿಂದ ಮತಪಟ್ಟಿದ್ದಾರೆ. ಕೊಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ 53 ವರ್ಷದ ಕೃಷ್ಣಕುಮಾರ್ ಕಾರ್ಯಕ್ರಮ ಮುಗಿದ ನಂತರ ಹೋಟೆಲ್ ಗೆ ಮರಳಿದ್ದು, ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.
ಕೊಲ್ಕತ್ತಾದ ನಜರುಲ್ ಮಂಚ್ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ಬಳಿಕ ಅವರು ಹೋಟೆಲ್ ಗೆ ತೆರಳಿದ್ದರು. ಈ ವೇಳೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಕೃಷ್ಣಕುಮಾರ್ ಹಿಂದಿ, ತೆಲುಗು, ಕನ್ನಡ, ತಮಿಳು, ಮಲಯಾಳಂ, ಬಂಗಾಳಿ ಭಾಷೆಗಳಲ್ಲಿ ಹಾಡಿದ್ದಾರೆ. ಕೃಷ್ಣಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ನಟ ಅಕ್ಷಯ್ ಕುಮಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೃಷ್ಣಕುಮಾರ್ ಕನ್ನಡದಲ್ಲಿ ‘ಮನಸಾರೆ’, ‘ಮಳೆ ಬರಲಿ ಮಂಜು ಇರಲಿ’, ‘ಬಹುಪರಾಕ್’, ‘ಯೋಗಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ಹಾಡಿದ್ದಾರೆ.