alex Certify BIG BREAKING: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು,

ದೊರೆ ಭಗವಾನ್ ಖ್ಯಾತಿಯ ಎಸ್.ಕೆ. ಭಗವಾನ್ 55 ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. 24 ಕಾದಂಬರಿಗಳನ್ನು ಸಿನಿಮಾ ಮಾಡಿದ ಹೆಗ್ಗಳಿಕೆ ಅವರಿಗಿದೆ. ‘ಸಂಧ್ಯಾ ರಾಗ’, ‘ಕಸ್ತೂರಿ ನಿವಾಸ’, ‘ಹೊಸ ಬೆಳಕು’, ‘ಜೀವನ ಚೈತ್ರ’, ‘ಎರಡು ಕನಸು’, ‘ಗಿರಿಕನ್ಯೆ’ ಮೊದಲಾದ ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.

ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು. ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ’ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದಾರೆ.

ಎಸ್.ಕೆ. ಭಗವಾನ್ ಅವರು 1933 ಜುಲೈ 3ರಂದು ತಮಿಳು ಬ್ರಾಹ್ಮಣ ಅಯ್ಯರ್ ಕುಟುಂಬದಲ್ಲಿ ಜನಿಸಿದರು. ಬೆಂಗಳೂರು ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಿದರು. ಯುವಕರಾಗಿದ್ದಾಗ ’ಹಿರಣ್ಣಯ್ಯ ಮಿತ್ರ ಮಂಡಳಿ’ಯಲ್ಲಿ ನಾಟಕಗಳನ್ನು ಮಾಡುತ್ತಿದ್ದರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕರಾಗಿ ಸಿನೆಮಾ ಜೀವನ ಆರಂಭಿಸಿದರು.

1966 ರಲ್ಲಿ ಎಂ.ಸಿ. ನರಸಿಂಹಮೂರ್ತಿಯವರೊಡಗೂಡಿ ಸಂಧ್ಯಾರಾಗ ಸಿನೆಮಾ ನಿರ್ದೇಶಿಸಿದರು. ನಂತರ ದೊರೈ-ಭಗವಾನ್ ಜೋಡಿಯು ರಾಜಕುಮಾರ್ ನಾಯಕನಟನಾಗಿರುವ ’ಜೇಡರ ಬಲೆ’ ಚಿತ್ರವನ್ನು ನಿರ್ದೆಶಿಸಿತು. ಇದು ಕನ್ನಡದಲ್ಲಿ ಜೇಮ್ಸ್ ಬಾಂಡ್‌ ಮಾದರಿಯ ಮೊದಲ ಚಿತ್ರವಾಗಿತ್ತು. ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಈ ನಿರ್ದೇಶಕದ್ವಯರು ಜೋಡಿಯಾಗೇ ನಿರ್ದೇಶಿಸಿದರು. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿದರು. ಇವರ 30 ಚಿತ್ರಗಳಲ್ಲಿ ಡಾ.ರಾಜಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಕೆಲವು ಚಿತ್ರಗಳಲ್ಲಿ ಅನಂತನಾಗ್ ಮತ್ತು ಲಕ್ಷ್ಮಿ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಎಸ್.ಕೆ ಭಗವಾನ್ ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವ ಹೊಂದಿದ್ದಾರೆ.

ದೊರೈರಾಜರ ಮರಣದ ನಂತರ ಇವರು ನಿರ್ದೇಶನದಿಂದ ನಿವೃತ್ತಿ ಹೊಂದಿದರು. 1993ರ ’ಮಾಂಗಲ್ಯ ಬಂಧನ’ ದೊರೈ-ಭಗವಾನ್ ಜೋಡಿ ನಿರ್ದೇಶನದ ಕೊನೆಯ ಚಿತ್ರ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...