‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಮಾಡಲಾಗಿದೆ ಎನ್ನುವ ಹಿನ್ನೆಲೆಯಲ್ಲಿ ಚಿತ್ರದ 16 ಶಾಟ್ ಗಳಿಗೆ ಕತ್ತರಿ ಹಾಕಲಾಗಿದೆ. ಚಿತ್ರದ ನಾಯಕ ಧ್ರುವ ಸರ್ಜಾ ಅವರು ಕ್ಷಮೆಯಾಚಿಸಿ, ಅವಮಾನದ ದೃಶ್ಯಗಳಿಗೆ ಹಾಕಲಾಗಿದೆ ಎಂದು ಹೇಳಿದ್ದಾರೆ.
ಯಾವುದೇ ಸಮುದಾಯಗಳಿಗೆ ಅವಮಾನ ಮಾಡುವ ಉದ್ದೇಶ ನಮಗಿಲ್ಲ. ನಮ್ಮ ಚಿತ್ರದಿಂದ ಯಾವುದಾದರೂ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇವೆ. ಬೇಸರ ತರಿಸಿದ ದೃಶ್ಯಗಳನ್ನು ಕತ್ತರಿಸಿ ಚಿತ್ರತಂಡ ಆಕ್ಷೇಪಾರ್ಹ ದೃಶ್ಯಗಳನ್ನು ಸರಿಪಡಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆಯಾಗಿದೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನವರ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿ ಬದುಕಿದ್ದೇವೆ. ಕಲೆಯೇ ನಮ್ಮ ಧರ್ಮವಾಗಿದ್ದು, ನಾವು ಎಲ್ಲ ಧರ್ಮಗಳನ್ನು ಗೌರವಿಸಿದ್ದೇವೆ. ಚಿತ್ರಕಥೆ ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಮ್ಮ ತಂಡಕ್ಕೆ ಬೇಸರ ತರಿಸಿದೆ. ಈ ಕಾರಣಕ್ಕೆ ಬೇಷರತ್ ಕ್ಷಮೆ ಕೇಳುತ್ತೇನೆ ಎಂದು ಅವರು ತಿಳಿಸಿದ್ದಾರೆ.