
ಸಾಹಸಸಿಂಹ ಡಾ. ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ವಿಜಯ ರಂಗರಾಜು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ.
ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತನಾಡಿರುವುದು ತಪ್ಪು. ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು ಎಂದು ಅವರು ಹೇಳಿದ್ದಾರೆ. ಕೈಮುಗಿದು ಕಣ್ಣೀರು ಹಾಕಿ ನಟ ವಿಜಯ ರಂಗರಾಜು ಕ್ಷಮೆಯಾಚಿಸಿದ್ದಾರೆ.
ವಿಷ್ಣುವರ್ಧನ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯ ರಂಗರಾಜು ವಿರುದ್ಧ ಕನ್ನಡ ಚಿತ್ರರಂಗ ತಿರುಗಿಬಿದ್ದಿದ್ದು, ವಿಷ್ಣು ಅಭಿಮಾನಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೊಲೀಸರಿಗೆ ದೂರು ನೀಡಿ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದರು.
ನಟರಾದ ಜಗ್ಗೇಶ್, ಪುನೀತ್ ರಾಜಕುಮಾರ್, ಸುದೀಪ್, ಗಣೇಶ್, ಯಶ್, ನಿರ್ದೇಶಕ ಎಸ್. ನಾರಾಯಣ್ ಸೇರಿದಂತೆ ಹಲವು ಗಣ್ಯರು ವಿಜಯ ರಂಗರಾಜು ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಅವರು ಕೈಮುಗಿದು ಕ್ಷಮೆಯಾಚಿಸಿದ್ದಾರೆ.