ಚೆನ್ನೈ: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 74 ವರ್ಷದ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ಸೋಂಕು ತಗುಲಿದ್ದು ಚೆನ್ನೈನ ಎಂಜಿ ಹೆಲ್ತ್ ಕೇರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿಲ್ಲ. ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿದೆ.
ಆಗಸ್ಟ್ 5 ರಂದು ಕೊರೊನಾ ಸೋಂಕು ತಗಲಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿಬಿ ಶೀಘ್ರವೇ ಚೇತರಿಸಿಕೊಂಡು ಬರುವುದಾಗಿ ಹೇಳಿದ್ದರು. ಆದರೆ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರವೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎನ್ನಲಾಗಿದೆ.