ಚೆನ್ನೈ: ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ.
ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಜೀವರಕ್ಷಕ ಸಾಧನಗಳ ನೆರವಿನೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾವಹಿಸಿ ಚಿಕಿತ್ಸೆ ನೀಡುತ್ತಿದೆ. ಅಂತರಾಷ್ಟ್ರೀಯ ವೈದ್ಯರ ಸಲಹೆಯೊಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಚೇತರಿಕೆಗಾಗಿ ಎಲ್ಲೆಡೆ ಪ್ರಾರ್ಥಿಸಲಾಗಿದೆ.