ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಸೆಂಟರ್ ನಲ್ಲಿ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಕೊರೋನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವೆಂಟಿಲೇಟರ್, ಎಕ್ಮೋ ಮಷೀನ್ ಸೇರಿ ಜೀವ ರಕ್ಷ ಸಾಧನಗಳ ನೆರವಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಎಸ್.ಪಿ.ಬಿ. ಅವರಿಗೆ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದ್ದು, ನಿರಂತರ ಚಿಕಿತ್ಸೆಯಿಂದ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಕೋಟ್ಯಂತರ ಅಭಿಮಾನಿಗಳಿಂದ ಅವರ ಚೇತರಿಕೆಗೆ ಶುಭ ಹಾರೈಸಲಾಗಿದೆ.