
ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಯಥಾಸ್ಥಿತಿಯಲ್ಲಿದೆ. ಆದರೆ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎನ್ನಲಾಗಿದೆ.
ಶ್ವಾಸಕೋಶ ತೊಂದರೆ ಕಾರಣ ಚಿಕಿತ್ಸೆ ಮುಂದುವರೆಸಲಾಗಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೈದ್ಯರ ತಂಡದಿಂದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್, ಇಸಿಎಂಒ ಸೇರಿ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
ಅವರ ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡು ಬರುತ್ತಿದೆ ಎಂದು ಹೇಳಲಾಗಿದೆ.