alex Certify ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಚೆನ್ನೈ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಅವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ. ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

ಜೀವರಕ್ಷಕ ಸಾಧನಗಳ ನೆರವಿನಿಂದ ಅವರಿಗೆ ತಜ್ಞ ವೈದ್ಯರ ತಂಡ ನಿರಂತರ ನಿಗಾ‌ ವಹಿಸಿ ಚಿಕಿತ್ಸೆ ನೀಡತೊಡಗಿದ್ದು, ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಕೋವಿಡ್ ಟೆಸ್ಟ್ ನಲ್ಲಿ ನೆಗೆಟಿವ್ ವರದಿ ಬಂದಿದೆ.

ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್ಪಿ ಚರಣ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಎಸ್ಪಿಬಿ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...