ಕೊರೊನಾ ಸೋಂಕಿಗೊಳಗಾಗಿ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಪರಿಸ್ಥಿತಿ ಕುರಿತು ಮಾಹಿತಿ ಇಲ್ಲಿದೆ.
ಎಸ್.ಪಿ. ಬಾಲಸುಬ್ರಹ್ಮಣ್ಯಂ ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದಾರೆ ಎಂದು ಹೇಳಲಾಗಿದ್ದು, ಆದರೆ ಸ್ವತಂತ್ರವಾಗಿ ಉಸಿರಾಡಲು ಸಾಧ್ಯವಾಗುತ್ತಿಲ್ಲವಾದ ಕಾರಣ ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.
ಎಸ್.ಪಿ.ಬಿ. ಈಗ ಅಲ್ಪ ಪ್ರಮಾಣದಲ್ಲಿ ಆಹಾರವನ್ನು ಸೇವಿಸುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗುವ ವಿಶ್ವಾಸವಿದೆ ಎಂದು ಅವರ ಪುತ್ರ ಎಸ್.ಪಿ. ಚರಣ್ ತಿಳಿಸಿದ್ದಾರೆ. ವಿಶ್ವದ ಕೋಟ್ಯಾಂತರ ಅಭಿಮಾನಿಗಳು ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದು, ಇದು ಫಲ ನೀಡಲಿದೆ.