alex Certify ಅಭಿನಯ ಚಕ್ರವರ್ತಿ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ: ಸಿಎಂ ಆಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿನಯ ಚಕ್ರವರ್ತಿ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ: ಸಿಎಂ ಆಶಯ

ಬೆಂಗಳೂರು: ನಟ ಸುದೀಪ್ ಇನ್ನಷ್ಟು ಸಾಧನೆ ಮಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ 25 ವರ್ಷ ಪೂರೈಸಿದ ಸುದೀಪ್ ಅವರ ಬೆಳ್ಳಿ ಮಹೋತ್ಸವ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸುದೀಪ್ ‘ತಾಯವ್ವ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ ಕಳೆದ 25 ವರ್ಷಗಳಲ್ಲಿ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಿರುತೆರೆಯಲ್ಲಿಯೂ ಛಾಪು ಮೂಡಿಸಿದ್ದಾರೆ. ಕನ್ನಡ ಮಾತ್ರವಲ್ಲದೆ, ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ಅವರು ಮಿಂಚುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತೀಯ ಚಿತ್ರರಂಗಕ್ಕೆ ಇನ್ನಷ್ಟು ಕೊಡುಗೆ ನೀಡಲಿ ಎಂದು ಸಿಎಂ ಶುಭಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಚಿತ್ರರಂಗದಲ್ಲಿ ನಾನು ಬೆಳೆಯಲು ಹಿರಿಯರು ಕಾರಣ ಎಂದು ತಿಳಿಸಿದ್ದಾರೆ.

ನಟ ರವಿಚಂದ್ರನ್ ಮಾತನಾಡಿ, ನೋವು ಅನುಭವಿಸಿದಷ್ಟು ಯಶಸ್ಸು ಸಿಗುತ್ತದೆ. ಸುದೀಪ್ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದ್ದಾರೆ. ಶಿವರಾಜಕುಮಾರ್ ಮಾತನಾಡಿ, ಮುಂದಿನ ದಿನಗಳಲ್ಲಿಯೂ ಇಬ್ಬರು ಒಟ್ಟಿಗೆ ಸಿನಿಮಾ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್, ರವಿಶಂಕರ್, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್. ರಂಗನಾಥ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ಸುನಿಲ್ ಕುಮಾರ್ ದೇಸಾಯಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...