alex Certify ಕಿಚ್ಚ ಸುದೀಪ್ ಬರ್ತಡೇ: ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚ ಸುದೀಪ್ ಬರ್ತಡೇ: ಮುಗಿಲುಮುಟ್ಟಿದ ಅಭಿಮಾನಿಗಳ ಸಂಭ್ರಮಾಚರಣೆ

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು 49ನೇ ವಸಂತಕ್ಕೆ ಕಾಲಿಟ್ಟಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲುಮಟ್ಟಿದೆ.

ನೆಚ್ಚಿನ ನಟನ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸುದೀಪ್ ನಿವಾಸದ ಬಳಿ ಶುಭಾಶಯ ಕೋರಲು ರಾತ್ರಿಯಿಂದಲೇ ಅಭಿಮಾನಿಗಳ ದಂಡೇ ನೆರೆದಿದೆ. ನೆಚ್ಚಿನ ನಟನ ಹುಟ್ಟುಹಬ್ಬ ಆಚರಿಸಲು ಕೇಕ್ ತಂದಿದ್ದ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಇನ್ನು ರಾಜ್ಯದ ಹಲವೆಡೆ ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಸುದೀಪ್ ಹುಟ್ಟುಹಬ್ಬ ಆಚರಿಸಲಾಗ್ತಿದೆ.

ಕನ್ನಡ ಮಾತ್ರವಲ್ಲದೇ, ತೆಲುಗು, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಅಭಿನಯಿಸಿರುವ ಸುದೀಪ್ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಸುದೀಪ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ‘ಬಿಲ್ಲಾ ರಂಗ ಬಾಷಾ’ ಪೋಸ್ಟರ್ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...