ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿಮಾ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳಲ್ಲಿಯೂ ತೊಡಗಿಕೊಂಡಿದ್ದಾರೆ. ಸಿನಿತಾರೆಯರ ಸಿಸಿಎಲ್ ಟೂರ್ನಿಯಲ್ಲಿ ಕರ್ನಾಟಕ ಬುಲ್ಡೋಜರ್ಸ್ ನಾಯಕರಾಗಿರುವ ಸುದೀಪ್ ಅವರಿಗೆ ಕ್ರಿಕೆಟ್ ಅಂದರೆ ಅಚ್ಚು-ಮೆಚ್ಚು.
ನಿನ್ನೆ ಅಬುದಾಭಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೆಕೆಆರ್ ನಡುವಿನ ಐಪಿಎಲ್ ಪಂದ್ಯವನ್ನು ಸುದೀಪ್ ವೀಕ್ಷಿಸಿದ್ದಾರೆ. ಪ್ರಿಯಾ ಸುದೀಪ್ ಅವರೊಂದಿಗೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ಸುದೀಪ್ ಪಂದ್ಯ ವೀಕ್ಷಿಸಿದ್ದಾರೆ. ಮುಂಬೈ ಮತ್ತು ಚೆನ್ನೈ ತಂಡಗಳ ನಡುವಿನ ಪಂದ್ಯವನ್ನು ಕೂಡ ಸುದೀಪ್ ವೀಕ್ಷಿಸಿದ್ದಾರೆ.