alex Certify ‘ಕೋಟಿಗೊಬ್ಬ 3’ ನೋಡಲು ಬಂದ ಸುದೀಪ್ ಅಭಿಮಾನಿಗಳಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೋಟಿಗೊಬ್ಬ 3’ ನೋಡಲು ಬಂದ ಸುದೀಪ್ ಅಭಿಮಾನಿಗಳಿಗೆ ಬಿಗ್ ಶಾಕ್

ಬಹು ನಿರೀಕ್ಷಿತ ‘ಕೋಟಿಗೊಬ್ಬ 3’ ಸಿನಿಮಾ ನೋಡಲು ಬಂದ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಹಾಗೂ ಸಿನಿರಸಿಕರಿಗೆ ನಿರಾಸೆಯಾಗಿದೆ. ‘ಕೋಟಿಗೊಬ್ಬ 3’ ಇಂದು ಬಿಡುಗಡೆಯಾಗಬೇಕಿತ್ತು. ಆದರೆ, ಸಿನಿಮಾ ಬಿಡುಗಡೆ ವಿಳಂಬವಾಗಿದೆ.

ಬೆಳಗ್ಗೆ 10 ಗಂಟೆಯಾದರೂ ಕೂಡ ಬೆಂಗಳೂರಿನ ಭೂಮಿಕಾ ಚಿತ್ರಮಂದಿರ ಸೇರಿಂದತೆ ಅನೇಕ ಚಿತ್ರಮಂದಿರಗಳ ಬಳಿ ಟಿಕೆಟ್ ಕೊಡದ ಕಾರಣ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವತ್ತು ‘ಕೋಟಿಗೊಬ್ಬ 3’ ಬಿಡುಗಡೆಯಾಗುವುದು ಡೌಟ್ ಎಂದು ಹೇಳಲಾಗುತ್ತಿದೆ. ಸಿನಿಮಾ ಬಿಡುಗಡೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ವಿಳಂಬವಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಇನ್ನು ಬಹುದಿನಗಳ ನಂತರ ನೆಚ್ಚಿನ ನಟನ ಸಿನಿಮಾ ನೋಡಲು ಬಂದಿದ್ದ ಅಭಿಮಾನಿಗಳು ಸಿನಿಮಾ ಬಿಡುಗಡೆ ವಿಳಂಬವಾಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಇವತ್ತೇ ಬಿಡುಗಡೆ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...