ಮೈಸೂರು: ನಟ ಕಿಚ್ಚ ಸುದೀಪ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
‘ಫ್ಯಾಂಟಮ್’ ಚಿತ್ರೀಕರಣದಲ್ಲಿ ಸುದೀಪ್ ಬ್ಯಸಿಯಾಗಿದ್ದು, ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಅವರೊಂದಿಗೆ ಬೆಳಗ್ಗೆ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಈ ವೇಳೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ.
ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ ಸುದೀಪ್ ದೇವಾಲಯದ ಬಳಿ ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಗುಂಪು ಸೇರಬೇಡಿ, ಅಂತರ ಕಾಯ್ದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಅಭಿಮಾನಿಗಳು ಫೋಟೋ, ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳುತ್ತಿದ್ದಂತೆ ಸುದೀಪ್, ಘೋಷಣೆ ಕೂಗಬೇಡಿ, ದೇವಾಲಯದಲ್ಲಿ ನಿಶಬ್ಧತೆ ಕಾಪಾಡಿ ಎಂದು ಸನ್ನೆಯ ಮೂಲಕ ತಿಳಿಸಿದ್ದಾರೆ.