ವಿಶ್ವದಾದ್ಯಂತ ಮಿಸ್ ಷರ್ಲಾಕ್ ಎಂದೇ ಪ್ರಸಿದ್ಧಿ ಪಡೆದಿದ್ದ ಜಪಾನಿನ ಪ್ರಸಿದ್ಧ ನಟಿ ಯುಕೊ ಟೇ ಕುಚಿ ಸಾವು ಜಪಾನ್ ಸರ್ಕಾರವನ್ನು ಬೆಚ್ಚಿಬೀಳಿಸಿದೆ. ನಟಿಯ ಮರಣದ ನಂತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಜನರಿಗೆ ಅಲ್ಲಿನ ಸರ್ಕಾರ ಮನವಿ ಮಾಡಿದೆ.
ನಟಿ ಸಾವಿನ ನಂತ್ರ ಮಾನಸಿಕ ಸಮಸ್ಯೆ ಎದುರಿಸುತ್ತಿದ್ದರೆ ಬೇರೆಯವರ ಸಹಾಯ ಪಡೆಯಿರಿ ಎಂದು ಜಪಾನ್ ಸರ್ಕಾರ ಹೇಳಿದೆ. ಅಂತವರಿಗೆ ಸಹಾಯ ಮಾಡುವಂತೆ ಜನರಿಗೆ ಮನವಿ ಮಾಡಿದೆ.
ಆತ್ಮಹತ್ಯೆ ಬಗ್ಗೆ ಯೋಚಿಸುವ ಜನರ ಮನಸ್ಸು ಬದಲಿಸಿ ಎಂದು ಸರ್ಕಾರ ಹೇಳಿದೆ. ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಕಟ್ಸುನೊಬು ನಟಿ ಸಾವಿನ ಬಗ್ಗೆ ಉಲ್ಲೇಖ ಮಾಡಿಲ್ಲ. ಆದ್ರೆ ಆತ್ಮಹತ್ಯೆ ಹೆಚ್ಚಾಗುತ್ತಿರುವ ಬಗ್ಗೆ ಹೇಳಿದ್ದಾರೆ. ಜುಲೈ ನಂತ್ರ ದೇಶದಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ ಎಂದಿದ್ದಾರೆ.
ನಟಿ ಯುಕೊ ಟೇ ಕುಚಿಗಿಂತ ಮೊದಲು ನಟಿ ಸೀ ಆಶಿನಾ ಆತ್ಮಹತ್ಯೆ ಮಾಡಿಕೊಂಡಿದ್ರು. ನಟ ಹರುಮಾ ಕೂಡ ಜುಲೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಾಮಾನ್ಯ ಜನರು ಮಾತ್ರವಲ್ಲ ಸೆಲೆಬ್ರಿಟಿಗಳ ಆತ್ಮಹತ್ಯೆ ಕೂಡ ಹೆಚ್ಚಾಗಿದೆ. ಆಗಸ್ಟ್ ನಲ್ಲಿ ಜಪಾನ್‌ನಲ್ಲಿ ಸುಮಾರು 1,900 ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಜಪಾನ್ ನಲ್ಲಿ ಹಿಂದಿನ ವರ್ಷಕ್ಕಿಂತ ಶೇಕಡಾ 15.3 ರಷ್ಟು ಹೆಚ್ಚಾಗಿದೆ.