ಸೂಪರ್ ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವವರಾಗಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ ಈ ಬಗ್ಗೆ ನೀಡಲಾದ ಪ್ರಶಸ್ತಿಯನ್ನು ಅವರ ಪುತ್ರಿ ಐಶ್ವರ್ಯಾ ಸ್ವೀಕರಿಸಿದ್ದಾರೆ.
ರಜನಿಕಾಂತ್ ಅವರು ತಮಿಳುನಾಡಿನಲ್ಲಿ ಅತಿ ಹೆಚ್ಚು ಮತ್ತು ಅತ್ಯಂತ ತ್ವರಿತ ತೆರಿಗೆ ಪಾವತಿದಾರರಾಗಿ ಗುರುತಿಸಲ್ಪಟ್ಟಿದ್ದಾರೆ. ಜುಲೈ 24 ರಂದು ನಡೆದ ಸಮಾರಂಭದಲ್ಲಿ ಅವರ ಪುತ್ರಿ ಐಶ್ವರ್ಯಾ ಅವರು ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು. ರಜನಿಕಾಂತ್ ಅವರು ಹಲವಾರು ವರ್ಷಗಳಿಂದ ತಮಿಳುನಾಡಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಾಗಿದ್ದಾರೆ.
ನಟ ಅಕ್ಷಯ್ ಕುಮಾರ್ ಅವರು ಸರ್ಕಾರದಿಂದ ಅತ್ಯಧಿಕ ತೆರಿಗೆ ಪಾವತಿದಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸೂಪರ್‌ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ ಹೆಚ್ಚು ತೆರಿಗೆ ಪಾವತಿಸಿದಕ್ಕಾಗಿ ಗೌರವಿಸಲಾಗಿದೆ. ಅವರ ಪರವಾಗಿ ಅವರ ಪುತ್ರಿ ಮತ್ತು ಚಲನಚಿತ್ರ ನಿರ್ಮಾಪಕಿ ಐಶ್ವರ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.