
ಚೆನ್ನೈ: ಖ್ಯಾತ ನಟ ಸೂರ್ಯ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಕೋವಿಡ್-19 ಕ್ಕೆ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದು, ಉತ್ತಮವಾಗಿ ಇದ್ದೇನೆ. ಜೀವನ ಸಹಜ ಸ್ಥಿತಿಗೆ ಮರಳಿದೆ ಎಂದು ಅವರು ತಿಳಿಸಿದ್ದಾರೆ.
ಕೊರೋನಾ ಬಗ್ಗೆ ನಾವು ಜಾಗರೂಕರಾಗಿರಬೇಕು, ಸುರಕ್ಷಿತವಾಗಿರಬೇಕು ಎಂದು ಅವರು ಹೇಳಿದ್ದು, ಚಿಕಿತ್ಸೆ ನೀಡಿದ ವೈದ್ಯರು ಮತ್ತು ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ಸೂರ್ಯ ಅಭಿನಯದ ‘ಸೂರರೈ ಪೋಟ್ರು’ ಬಿಡುಗಡೆಯಾಗಿತ್ತು. ಇದು ಏರ್ ಡೆಕ್ಕನ್ ಕ್ಯಾಪ್ಟನ್ ಜಿ.ಆರ್. ಗೋಪಿನಾಥ್ ಅವರ ಜೀವನ ಆಧರಿಸಿದ ಚಿತ್ರವಾಗಿದೆ.