alex Certify ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಗೆಳತಿ ರಿಯಾಗೆ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ: ಗೆಳತಿ ರಿಯಾಗೆ ‘ಬಿಗ್ ಶಾಕ್’

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಬಿಹಾರದ ಮುಜಾಫರ್ ಪುರ ಕೋರ್ಟ್ ನಲ್ಲಿ ದೂರು ದಾಖಲಾಗಿದೆ.

ರಿಯಾ ಚಕ್ರವರ್ತಿ ಪರೋಕ್ಷವಾಗಿ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಕಾರಣರಾಗಿದ್ದಾರೆ ಎಂದು ಕುಂದನ್ ಕುಮಾರ್ ಎಂಬುವರು ದೂರು ನೀಡಿದ್ದು ಜೂನ್ 24ರಂದು ವಿಚಾರಣೆ ನಿಗದಿಯಾಗಿದೆ. ಸುಶಾಂತ್ ಸಿಂಗ್ ಸಾವಿನ ತನಿಖೆ ಕೈಗೊಂಡಿರುವ ಮುಂಬೈನ ಬಾಂದ್ರಾ ಪೊಲೀಸರು ಗುರುವಾರ 9 ಗಂಟೆಗಳ ಕಾಲ ರಿಯಾ ಚಕ್ರವರ್ತಿ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಈ ನಡುವೆ ಸುಶಾಂತ್ ಸಿಂಗ್ ಅವರಿಗೆ ಬಾಲಿವುಡ್ ನ ಪ್ರತಿಷ್ಠಿತ ನಿರ್ಮಾಣ ಕಂಪನಿಗಳು ಬ್ಯಾನ್ ಮಾಡಿದ್ದರಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಮಾತುಗಳು ಕೇಳಿಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...