alex Certify ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ಗೆಳತಿ ವಿರುದ್ಧ ತಂದೆಯಿಂದಲೇ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್: ಗೆಳತಿ ವಿರುದ್ಧ ತಂದೆಯಿಂದಲೇ ದೂರು

Sushant Singh Rajput with Rhea Chakraborty.

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಲಾಗಿದೆ. ಸುಶಾಂತ್ ಸಿಂಗ್ ಅವರ ತಂದೆ ಪಾಟ್ನಾ ಕೇಂದ್ರ ವಲಯದ ಇನ್ಸ್ ಪೆಕ್ಟರ್ ಜನರಲ್ ಸಂಜಯ್ ಸಿಂಗ್ ಅವರಿಗೆ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿದ್ದಾರೆ.

ಸುಶಾಂತ್ ಸಿಂಗ್ ಅವರ ತಂದೆ ಕೆ.ಕೆ. ಸಿಂಗ್ ನೀಡಿದ ದೂರಿನ ಅನ್ವಯ ನಟನ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಾಲ್ವರು ಸದಸ್ಯರ ತಂಡವನ್ನು ಮುಂಬೈಗೆ ಕಳುಹಿಸಲಾಗಿದ್ದು‌, ಮುಂಬೈ ಪೊಲೀಸರಿಂದ ಪ್ರಕರಣದ ಮಾಹಿತಿ, ದಾಖಲೆಗಳನ್ನು ಸಂಗ್ರಹಿಸಲಾಗುವುದು ಎಂದು ಸಂಜಯ್ ಸಿಂಗ್ ತಿಳಿಸಿದ್ದಾರೆ.

ಜೂನ್ 14 ರಂದು ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮುಂಬೈ ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರ ಶೋವಿತ್ ಚಕ್ರವರ್ತಿ ಹೇಳಿಕೆಯನ್ನು ದಾಖಲಿಸಲಾಗಿದೆ. ಸಂಜಯ್ ಲೀಲಾ ಬನ್ಸಾಲಿ, ಆದಿತ್ಯ ಚೋಪ್ರಾ, ಧರ್ಮ ಪ್ರೋಡಕ್ಷನ್ಸ್ ಸಿಇಒ ಅಪೂರ್ವ ಮೆಹತಾ ಸೇರಿದಂತೆ 40 ಜನರನ್ನು ಇದುವರೆಗೆ ಪ್ರಶ್ನಿಸಲಾಗಿದೆ.

ಸುಶಾಂತ್ ನಿಧನದ ನಂತರ ರಿಯಾ ಸಾಮಾಜಿಕ ಜಾಲತಾಣದಲ್ಲಿ ತೀವ್ರ ನಿಂದನೆಗೆ ಒಳಗಾಗಿದ್ದರು. ಅಲ್ಲದೆ ಈ ಕೇಂದ್ರ ತನಿಖಾ ದಳಕ್ಕೆ ವರ್ಗಾಯಿಸಬೇಕೆಂದು ರಿಯಾ ಚಕ್ರವರ್ತಿ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...