alex Certify ಸಾಮಾನ್ಯ ವ್ಯಕ್ತಿಯಾಗಿದ್ದ ಸುಶಾಂತ್ ಸಿಂಗ್ ರಜಪೂತ್ ಸ್ಟಾರ್ ನಟನಾದ್ರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾನ್ಯ ವ್ಯಕ್ತಿಯಾಗಿದ್ದ ಸುಶಾಂತ್ ಸಿಂಗ್ ರಜಪೂತ್ ಸ್ಟಾರ್ ನಟನಾದ್ರು…!

ಉದಯೋನ್ಮುಖ ಕಲಾವಿದ ಸುಶಾಂತ್ ಸಿಂಗ್ ರಜಪೂತ್ ಸಾಮಾನ್ಯ ವ್ಯಕ್ತಿಯಾಗಿದ್ದವರು ಬಾಲಿವುಡ್ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಸುಶಾಂತ್ ಸಿಂಗ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಕಳೆದ ಆರು ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಿನ್ನೆ ಕೆಲವು ಸ್ನೇಹಿತರೊಂದಿಗೆ ಅವರು ಜೊತೆಗಿದ್ದರು ಎನ್ನಲಾಗಿದೆ. ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾವಿನ ನಂತರ ಅವರು ಮರುಗಿದ್ದರು. ನಾಲ್ಕು ದಿನಗಳ ಹಿಂದೆಯಷ್ಟೇ ದಿಶಾ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಮರುಗಿದ್ದ ಸುಶಾಂತ್ ಸಿಂಗ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

1986 ಜನವರಿ 21 ರಂದು ಬಿಹಾರದಲ್ಲಿ ಜನಿಸಿದ್ದ ಸುಶಾಂತ್ 11 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸುಶಾಂತ್ ಸಿಂಗ್ ಅವರು ‘ಪವಿತ್ರ ರಿಶ್ತಾ’ ಧಾರಾವಾಹಿ ಮೂಲಕ ಕಿರುತೆರೆಯಲ್ಲಿ ಖ್ಯಾತರಾಗಿದ್ದರು. ‘ಕಿಸ್ ದೇಶ್ ಮೇ ಹೇ ಮೇರಾ ದಿಲ್’ ಧಾರಾವಾಹಿಯಲ್ಲಿ ನಟಿಸಿದ್ದ ಅವರು 2013 ರಲ್ಲಿ ‘ಕಾಯ್ ಪೋ ಚೇ’ ಸಿನಿಮಾ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರದಲ್ಲಿ ‘ಶುದ್ಧ್ ದೇಸಿ ರೊಮ್ಯಾನ್ಸ್’, ‘ಪಿಕೆ’, ‘ಎಂಎಸ್ ಧೋನಿ ದಿ ಅನ್ ಟೋಲ್ಡ್ ಸ್ಟೋರಿ’, ‘ಕೇದಾರನಾಥ್’, ‘ವೆಲ್ ಕಮ್ ಟು ನ್ಯೂಯಾರ್ಕ್’ ಮೊದಲಾದ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...