ಮುಂಬೈ: ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೊಬೈಲ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ನಿವಾಸದಲ್ಲಿ ತಡಕಾಡಿದರೂ, ಡೆತ್ ನೋಟ್ ಪತ್ತೆಯಾಗಿಲ್ಲ. ಮೃತದೇಹವಿದ್ದ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಅವರ ಆತ್ಮಹತ್ಯೆಯ ಕುರಿತಾಗಿ ತನಿಖೆ ಕೈಗೊಂಡಿದ್ದಾರೆ. ಮನೆಕೆಲಸದವರ ವಿಚಾರಣೆ ನಡೆಸಲಾಗಿದೆ.
ಸುಶಾಂತ್ ಮನೆಯಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಡಾ.ಆರ್.ಎನ್. ಕೂಪರ್ ಮುನ್ಸಿಪಲ್ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಸುಶಾಂತ್ ಮನೆಯಲ್ಲಿ ಯಾವುದೇ ಡೆತ್ ನೋಟ್ ದೊರೆತಿಲ್ಲ. ಮನೆಯ ಕೆಲಸದವರ ವಿಚಾರಣೆ ನಡೆಸಲಾಗಿದೆ. ಮೊಬೈಲ್ ಆಧರಿಸಿ ಮಾಹಿತಿ ಕಲೆಹಾಕಲಾಗಿದೆ ಎಂದು ಹೇಳಲಾಗಿದೆ.