
ಹೈದರಾಬಾದ್: ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೆಬ್ ಸಿರೀಸ್ ವೊಂದರ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿ ತಂಗಿದ್ದ ಅವರಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ.
ಭಾನುವಾರ ಕೋವಿಡ್ ಪರೀಕ್ಷೆಗೆ ಒಳಗಾದ ಅವರಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 2 ತಿಂಗಳ ಹಿಂದಷ್ಟೇ ತಮನ್ನಾ ಪೋಷಕರಿಗೆ ಕೊರೊನಾ ಸೋಂಕು ತಗುಲಿತ್ತು.