alex Certify ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ನಟಿ ಖುಷ್ಬೂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ನಟಿ ಖುಷ್ಬೂ

ಬಿಜೆಪಿ ನಾಯಕಿ ಹಾಗೂ ಹಿರಿಯ ನಟಿ ಖುಷ್ಬೂ ಸುಂದರ್​​ ಅವರ ಕಾರು ತಮಿಳುನಾಡಿನಲ್ಲಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್​ ಖುಷ್ಬೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತಮ್ಮ ಕಾರಿನಲ್ಲಿ ಮೆಲ್ಮರುವಥುರ್​ ಬಳಿ ಪ್ರಯಾಣಿಸುತ್ತಿದ್ದ ವೇಳೆ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.

ಇನ್ನು ಈ ವಿಚಾರವಾಗಿ ಟ್ವೀಟ್​ ಮೂಲಕ ಮಾಹಿತಿ ನೀಡಿರುವ ಖುಷ್ಬೂ, ಕುಡಲೂರ್​​ಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಅಂತಾ ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮೆಲ್ಮರ್​ವತೂರ್​ನಲ್ಲಿ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ದೇವರ ದಯೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ನಾವು ಕುಡಲೂರ್​ಗೆ ನಮ್ಮ ಪಯಣ ಮುಂದುವರಿಸಿದ್ದೇವೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಅಂತಾ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...