
ಬೆಂಗಳೂರು: ತೆಲುಗು ನಟ ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಇಂದು ತಾರಕರತ್ನ ಅವರನ್ನು ಹೈದರಾಬಾದ್ ಆಸ್ಪತ್ರೆಗೆ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.
ರಾತ್ರಿ 8.30 ರ ನಂತರ ಹೈದರಾಬಾದ್ ಆಸ್ಪತ್ರೆಗೆ ತಾರಕರತ್ನ ಅವರನ್ನು ಸ್ಥಳಾಂತರ ಮಾಡಲಾಗುವುದು. ಪ್ರಸ್ತುತ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ತಾರಕರತ್ನ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆಯಿಂದ ಆಸ್ಪತ್ರೆ ಸಮೀಪ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಕುಪ್ಪಂ ಬಳಿ ಜನವರಿ 27ರಂದು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾ.ರಾ. ಲೋಕೇಶ್ ಅವರ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದರು. ತೀವ್ರ ಹೃದಯಘಾತವಾಗಿ ಕುಸಿದು ಬಿದ್ದ ಅವರನ್ನು ಕುಪ್ಪಂನ ಪಿಇಎಸ್ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿತ್ತು.