alex Certify ‘ಪವರ್ ಸ್ಟಾರ್’ ಬೆಂಬಲದಿಂದ ಬಿಜೆಪಿಗೆ ಆನೆಬಲ: ಕಮಲ ಪಕ್ಷ ಗೆಲ್ಲಿಸಲು ಅಭಿಮಾನಿಗಳಿಗೆ ಕರೆ ನೀಡಿದ ಪವನ್ ಕಲ್ಯಾಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪವರ್ ಸ್ಟಾರ್’ ಬೆಂಬಲದಿಂದ ಬಿಜೆಪಿಗೆ ಆನೆಬಲ: ಕಮಲ ಪಕ್ಷ ಗೆಲ್ಲಿಸಲು ಅಭಿಮಾನಿಗಳಿಗೆ ಕರೆ ನೀಡಿದ ಪವನ್ ಕಲ್ಯಾಣ್

ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಗೆ ಸ್ಪರ್ಧಿಸದಿರಲು ಜನಸೇನಾ ಪಕ್ಷ ನಿರ್ಧರಿಸಿದೆ.

ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಜನಸೇನಾ ನಿರ್ಧರಿಸಿದೆ. ಜನಸೇನಾ ಪಕ್ಷದ ಸಂಸ್ಥಾಪಕ, ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಅಭಿಮಾನಿಗಳಿಗೆ ಸೂಚನೆ ನೀಡಿದ್ದಾರೆ.

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ, ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ್ ಅವರೊಂದಿಗೆ ಸಭೆ ನಡೆಸಿದ ನಂತರ ಜನ ಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರು, ತಮ್ಮ ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಘೋಷಿಸಿದ್ದಾರೆ.

ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಲಾಗುವುದು. ನರೇಂದ್ರ ಮೋದಿ ನಾಯಕತ್ವ ಬಲಪಡಿಸಲು ನಾವು ಚುನಾವಣೆಯಿಂದ ಹೊರಗುಳಿಯಲು ನಿರ್ಧರಿಸಿದ್ದೇವೆ. ಬಿಜೆಪಿಯನ್ನು ಅಧಿಕಾರಕ್ಕೆ ತರಲು ಒಟ್ಟಾಗಿ ಕೆಲಸ ಮಾಡಲಿದ್ದೇವೆ ಎಂದು ಪವನ್ ಕಲ್ಯಾಣ್ ಪೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...