
ಹೈದರಾಬಾದ್: ಟಾಲಿವುಡ್ ನ ಖ್ಯಾತ ನಿರ್ಮಾಪಕ ಪೋಕುರಿ ರಾಮರಾವ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
‘ರಣಂ’, ‘ಯಜ್ಞಂ’ ಸೇರಿದಂತೆ ಹಲವು ಸಿನಿಮಾ ನಿರ್ಮಾಣ ಮಾಡಿದ್ದ 65 ವರ್ಷದ ಪೋಕುರಿ ರಾಮರಾವ್ ಅವರಿಗೆ ಕೊರೊನಾ ಸೋಂಕು ತಗಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.