ದೇಶಾದ್ಯಂತ ‘ದ ಕಾಶ್ಮೀರ್ ಫೈಲ್ಸ್” ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಈ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡದಲ್ಲಿ ಸಿನಿಮಾ ಉಚಿತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಾಳೆಯಿಂದ ಐದು ದಿನಗಳ ಕಾಲ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಲು ವ್ಯವಸ್ಥೆ ಮಾಡಿದ್ದಾರೆ. ಹುಬ್ಬಳ್ಳಿ ರೂಪಂ ಟಾಕೀಸ್, ಧಾರವಾಡ ಶ್ರೀನಿವಾಸ ಟಾಕಿಸ್ ನಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಮಧ್ಯಾಹ್ನ 3 ಗಂಟೆ, ಸಂಜೆ 6 ಗಂಟೆಗೆ ಶೋ ವೀಕ್ಷಣೆಗೆ ಅವಕಾಶವಿದೆ. ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.
ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ಉಚಿತವಾಗಿ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗೆ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ.