
ಭೋಪಾಲ್: ವಿವಾದ ಸೃಷ್ಟಿಸಿರುವ ‘ದಿ ಕೇರಳ ಸ್ಟೋರಿ’ ಹಿಂದಿ ಸಿನಿಮಾಗೆ ಮಧ್ಯಪ್ರದೇಶದಲ್ಲಿ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಲವ್ ಜಿಹಾದ್, ಉಗ್ರವಾದಕ್ಕೆ ಧರ್ಮದ ಬಳಕೆಯ ಬಗ್ಗೆ, ಹೆಣ್ಣು ಮಕ್ಕಳನ್ನು ಧರ್ಮದ ಹೆಸರಿನಲ್ಲಿ ವಂಚಿಸುತ್ತಿರುವ ಉಗ್ರರ ಕುತಂತ್ರವನ್ನು ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಬಯಲು ಮಾಡಲಾಗಿದೆ. ಇಂತಹ ಸಂಚುಗಳಿಗೆ ಅಂಕುಶ ಹಾಕಲು ಎಲ್ಲಾ ರಾಜ್ಯಗಳಲ್ಲಿ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ.
‘ದಿ ಕೇರಳ ಸ್ಟೋರಿ’ ಹಿಂದಿ ಸಿನಿಮಾಗೆ ಮಧ್ಯಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.