![](https://kannadadunia.com/wp-content/uploads/2017/11/cinema-1.jpg)
ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಮಾರ್ಚ್ ನಿಂದಲೂ ಬಂದ್ ಆಗಿರುವ ಚಿತ್ರಮಂದಿರಗಳು ಪುನಾರಂಭವಾಗುವ ಸಾಧ್ಯತೆ ಇದೆ.
ಅನ್ಲಾಕ್ ಪ್ರಕ್ರಿಯೆ ಹಂತಗಳು ಮುಂದುವರೆದಂತೆ ಸಿನಿಮಾ ಮತ್ತು ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯ ಬಳಕೆ ಸೇರಿದಂತೆ ವಿವಿಧ ನಿಯಮಗಳನ್ನು ಪಾಲಿಸುವುದರೊಂದಿಗೆ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ಚಿತ್ರಮಂದಿರಗಳು ಸೆಪ್ಟೆಂಬರ್ 15 ರಿಂದ ಪುನಾರಂಭವಾಗಬಹುದು ಎಂದು ಹೇಳಲಾಗಿದ್ದು ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.