ಬಾಲಿವುಡ್ನ ಹಿಟ್ ಚಿತ್ರ ’ಕಹೋ ನಾ ಪ್ಯಾರ್ ಹೈ’ ಚಿತ್ರದ ’ಎಕ್ ಪಲ್ ಕಾ ಜೀನಾ’ ಹಾಡಿಗೆ ಸ್ಟೆಪ್ ಹಾಕುತ್ತಿರುವ ಅಪ್ಪ – ಮಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಫೇಮಸ್ ಆಗಿದ್ದಾರೆ.
ಇಬ್ಬರೂ ಸಾಂಪ್ರದಾಯಿಕ ಧಿರಿಸಿನಲ್ಲಿದ್ದು, ಹಿಟ್ ಹಾಡಿಗೆ ಸ್ಟೆಪ್ ಹಾಕುತ್ತಿರುವುದನ್ನು ಕಾಣಬಹುದಾಗಿದೆ. ಮದುವೆ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ನೃತ್ಯ ಮಾಡುತ್ತಿದ್ದಾರೆ. ಇದೇ ವೇಳೆ ಜನರು ಅವರ ಡ್ಯಾನ್ಸ್ಗೆ ಚಿಯರ್ ಮಾಡುತ್ತಿದ್ದಾರೆ.
ಈ ವಿಡಿಯೋವನ್ನು @roshanprakash5 ಹೆಸರಿನ ಟ್ವಿಟರ್ ಬಳಕೆದಾರರೊಬ್ಬರು ಟ್ವೀಟ್ ಮಾಡಿದ್ದು, ಹೃತಿಕ್ ರೋಷನ್ ಹೆಸರನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.