ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಕೃಷ್ಣ ಅವರ ಹಿರಿಯ ಪುತ್ರ, ನಟ ಮಹೇಶ್ ಬಾಬು ಅವರ ಸಹೋದರ ರಮೇಶ್ ಬಾಬು ನಿಧನರಾಗಿದ್ದಾರೆ.
ಅವರು ಯಕೃತ್ತು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ರಮೇಶ್ ಬಾಬು ಅವರ ಸೋಂಕು ತೀವ್ರಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದ ಮಾರ್ಗಮಧ್ಯದಲ್ಲೇ ನಿಧನರಾರಾಗಿದ್ದಾರೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.
ರಮೇಶ್ ಬಾಬು ನಿಧನದಿಂದ ಘಟ್ಟಮನೇನಿ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ದುಃಖಿತ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿ ಟ್ವೀಟ್‌ಗಳನ್ನು ಮಾಡಿದ್ದಾರೆ. ರಮೇಶ್ ಬಾಬು ಅವರನ್ನು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು ಎಂದು ತಿಳಿದುಬಂದಿದೆ.
ರಮೇಶ್ ಬಾಬು ಅವರು 1974 ರಲ್ಲಿ ‘ಅಲ್ಲೂರಿ ಸೀತಾರಾಮ ರಾಜು’ ಚಿತ್ರದ ಮೂಲಕ ತೆರೆಗೆ ಪಾದಾರ್ಪಣೆ ಮಾಡಿದರು. ಅವರು 15 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದರು.
56 ವರ್ಷದ ರಮೇಶ್ ಬಾಬು ಅವರು ‘ಬಜಾರ್ ರೌಡಿ’, ‘ಮುಗ್ಗುರು ಕೊಡುಕುಲು’ ಸೇರಿದಂತೆ ಹಲವು ಚಿತ್ರಗಳಿಗೆ ಹೆಸರುವಾಸಿಯಾಗಿದ್ದರು. ಅವರ ಅಕಾಲಿಕ ಮರಣಕ್ಕೆ ಹಲವಾರು ಅಭಿಮಾನಿಗಳು ಮತ್ತು ಅನುಯಾಯಿಗಳು ಸಾಮಾಜಿಕ ಮಾಧ್ಯಮದಲ್ಲಿ ಸ್ಟಾರ್ ನಷ್ಟಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ರಮೇಶ್ ಬಾಬು ಅವರು ಪತ್ನಿ ಮೃದುಲಾ ಘಟ್ಟಮನೇನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಭಾನುವಾರ ನಡೆಯಲಿದೆ.
ಅವರು ನಟ ಮಾತ್ರವಲ್ಲದೆ, ತೆಲುಗು ಚಲನಚಿತ್ರೋದ್ಯಮದಲ್ಲಿ ಹಲವಾರು ಚಲನಚಿತ್ರಗಳಿಗೆ ಕೃಷ್ಣ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕರಾಗಿದ್ದರು.
ಮಹೇಶ್ ಬಾಬು ಅವರು ಇತ್ತೀಚೆಗೆ COVID ಗೆ ಧನಾತ್ಮಕ ಪರೀಕ್ಷೆ ಮಾಡಿದ್ದಾರೆ. ಅವರು ಪ್ರತ್ಯೇಕ ವಾಸದಲ್ಲಿರುವುದರಿಂದ ಅಂತಿಮ ವಿಧಿಗಳಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.