alex Certify ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಮತ್ತೊಂದು ತಿರುವು: ನಾಪತ್ತೆಯಾಗಿದ್ದ ಗೆಳತಿ ಮೌನ ಮುರಿದು ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಮತ್ತೊಂದು ತಿರುವು: ನಾಪತ್ತೆಯಾಗಿದ್ದ ಗೆಳತಿ ಮೌನ ಮುರಿದು ಮಹತ್ವದ ಮಾಹಿತಿ

Rhea Chakraborty, Blamed By Sushant Singh Rajput's Family: Truth ...

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕುಟುಂಬದಿಂದ ಆರೋಪಕ್ಕೆ ಒಳಗಾಗಿರುವ ರಿಯಾ ಚಕ್ರವರ್ತಿ ಸತ್ಯ ಮೇಲುಗೈ ಸಾಧಿಸುತ್ತದೆ ಎಂದು ಹೇಳಿದ್ದಾರೆ.

ನಾಪತ್ತೆಯಾಗಿದ್ದ ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಸುಶಾಂತ್ ಸಿಂಗ್ ಕುಟುಂಬ ಪಾಟ್ನಾದಲ್ಲಿ ಆಕೆಯ ವಿರುದ್ಧ ದೂರು ದಾಖಲಿಸಿದ್ದು ತನಿಖೆ ಆರಂಭವಾಗುತ್ತಿದ್ದಂತೆ ರಿಯಾ ಚಕ್ರವರ್ತಿ ನಾಪತ್ತೆಯಾಗಿದ್ದಳು.

ಆಕೆಯ ಪರ ವಕೀಲರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ನನಗೆ ನ್ಯಾಯ ಸಿಗಲಿದೆ. ಸತ್ಯವು ಜಯಿಸಲಿದೆ ಎಂದು ಹೇಳಿಕೊಂಡಿರುವ ರಿಯಾ ಚಕ್ರವರ್ತಿ ವಿಡಿಯೋದಲ್ಲಿ ಕಣ್ಣೀರಿಟ್ಟಿದ್ದಾಳೆ.

ಸುಶಾಂತ್ ಸಿಂಗ್ ರಜಪೂತ್ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡು ಮಾನಸಿಕ ಕಿರುಕುಳ ನೀಡಿದ್ದಾಳೆ ಎಂದು ರಿಯಾ ವಿರುದ್ಧ ಸುಶಾಂತ್ ಸಿಂಗ್ ಕುಟುಂಬದವರು ಆರೋಪಿಸಿದ್ದಾರೆ. ಈ ಕುರಿತಾಗಿ ವಿಡಿಯೋದಲ್ಲಿ ಪ್ರತಿಕ್ರಿಯೆ ನೀಡಿರುವ ರಿಯಾ, ನನಗೆ ದೇವರು ಮತ್ತು ನ್ಯಾಯಾಂಗದ ಮೇಲೆ ಅಪಾರ ನಂಬಿಕೆ ಇದೆ. ನನಗೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ. ದೃಶ್ಯ ಮಾಧ್ಯಮಗಳಲ್ಲಿ ನನ್ನ ಬಗ್ಗೆ ಸಾಕಷ್ಟು ಭಯಾನಕ ಸಂಗತಿಗಳನ್ನು ಹೇಳಲಾಗುತ್ತಿದೆ. ವಕೀಲರ ಸಲಹೆಯಂತೆ ಪ್ರತಿಕ್ರಿಯೆ ನೀಡುತ್ತಿದ್ದು ಸತ್ಯ ಮೇಲುಗೈ ಸಾಧಿಸುತ್ತದೆ ಎಂದು ಹೇಳಿ ಕಣ್ಣೀರಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...