
ಕೊರೊನಾ ಬಿಕ್ಕಟ್ಟಿನ ಮಧ್ಯೆ ಕಲಾವಿದರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಈಗ ಕಿರುತೆರೆ ನಟ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಮೀರ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಬೈನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಮೀರ್ ಶರ್ಮಾ ‘ಕಹಾನಿ ಘರ್-ಘರ್ ಕಿ’ ಧಾರಾವಾಹಿಯಲ್ಲಿ ನಟಿಸಿದ್ದ. ನಟ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡು ಎರಡು ದಿನವಾಗಿದೆ ಎಂದು ಅಂದಾಜಿಸಲಾಗಿದೆ. ಪೊಲೀಸರು ಮನೆಯೊಳಗೆ ಹೋದಾಗ ಶವ ಕೊಳೆತ ಸ್ಥಿತಿಯಲ್ಲಿತ್ತಂತೆ. ಸೆಕ್ಯುರಿಟಿ ಗಾರ್ಡ್ ಗೆ ಕಿಟಕಿಯಲ್ಲಿ ಶವ ಫ್ಯಾನ್ ಗೆ ನೇತಾಡುತ್ತಿರುವುದು ಕಾಣಿಸಿದೆ. ತಕ್ಷಣ ಆತ ಪೊಲೀಸರಿಗೆ ಫೋನ್ ಮಾಡಿದ್ದನಂತೆ.
ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ. ಫೆಬ್ರವರಿಯಲ್ಲಿ ನಟ ಮನೆಯನ್ನು ಬಾಡಿಗೆಗೆ ಪಡೆದಿದ್ದ ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.