alex Certify ಮತ್ತೊಂದು ಪಕ್ಷ ಸೇರ್ಪಡೆಗೆ ರೆಡಿಯಾದ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಂದು ಪಕ್ಷ ಸೇರ್ಪಡೆಗೆ ರೆಡಿಯಾದ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್

ಮುಂಬೈ: ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದರು.

ಐದೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ದೂರವಾಗಿದ್ದ ಅವರು ಮತ್ತೊಂದು ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಮಿತ್ರ ಪಕ್ಷ ಶಿವಸೇನೆಗೆ ಸೇರ್ಪಡೆಯಾಗಲಿದ್ದಾರೆ. ನವೆಂಬರ್ 30 ರಂದು ಊರ್ಮಿಳಾ ಮಾತೋಂಡ್ಕರ್ ಶಿವಸೇನೆ ಸೇರಲಿದ್ದಾರೆ.

2019 ರ ಮಾರ್ಚ್ ನಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು ಮುಂಬೈ ಉತ್ತರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದರು. 5 ತಿಂಗಳ ಬಳಿಕ ಪಕ್ಷದಿಂದ ದೂರವಾಗಿದ್ದರು. ಈಗ ಶಿವಸೇನೆಗೆ ಸೇರಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...