ಮುಂಬೈ: ಖ್ಯಾತ ನಟಿ ಹಾಗೂ ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಅವರ ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಈ ಕುರಿತಾಗಿ ಅವರು ಮಹಾರಾಷ್ಟ್ರ ರಾಜ್ಯ ಪೊಲೀಸ್ ಸೈಬರ್ ವಿಭಾಗಕ್ಕೆ ದೂರು ನೀಡಿದ್ದು ಎಫ್ಐಆರ್ ದಾಖಲಿಸಲಾಗಿದೆ.
ನನ್ನ ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಊರ್ಮಿಳಾ ಮಾತೋಂಡ್ಕರ್ ತಿಳಿಸಿದ್ದು, ಅವರ ಇನ್ಸ್ಟ್ರಾಗ್ರಾಮ್ ಖಾತೆಯಿಂದ ಪೋಸ್ಟ್ ಗಳನ್ನು ತೆಗೆದುಹಾಕಲಾಗಿದೆ. ಇನ್ಸ್ಟಾಗ್ರಾಂ ಸಪೋರ್ಟ್ ಎಂದು ಬದಲಿಸಲಾಗಿದೆ. ಹಕ್ಕುಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಸ್ವಯಂಚಾಲಿತ ಸಂದೇಶವಿದು ಎಂದು ಪ್ರೊಫೈಲ್ ನಲ್ಲಿ ಬರೆಯಲಾಗಿದೆ. ಈ ಕುರಿತಾಗಿ ಅವರು ವಿಭಾಗಕ್ಕೆ ದೂರು ನೀಡಿದ್ದೇನೆ. ಮಹಿಳೆಯರು ಸೈಬರ್ ಅಪರಾಧಗಳನ್ನು ಲಘುವಾಗಿ ಪರಿಗಣಿಸಬಾರದು ಎಂದು ಅವರು ಸಲಹೆ ನೀಡಿದ್ದಾರೆ.
2019 ರ ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಅವರು ಇತ್ತೀಚೆಗಷ್ಟೇ ಶಿವಸೇನೆಗೆ ಸೇರ್ಪಡೆಯಾಗಿದ್ದರು.