ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ಪ್ರಕರಣದಲ್ಲಿ ‘ಬಿಗ್ ಬಾಸ್’ ಮನೆಯಿಂದಲೇ ಬಂಧನಕ್ಕೊಳಗಾಗಿದ್ದ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಅವರಿಗೆ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿತ್ತು. ಪರಪ್ಪನ ಅಗ್ರಹಾರ ಜೈಲಿನಿಂದ ವರ್ತೂರು ಸಂತೋಷ್ ಬಿಡುಗಡೆಯಾಗಿ ಹೊರ ಬಂದ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು ಹಾರ ಹಾಕಿ ಸಭರ್ಜರಿ ಸ್ವಾಗತ ನೀಡಿದ್ದಾರೆ. ಸಂಭ್ರಮಾಚರಣೆ ನಡೆಸಿದ್ದಾರೆ.
‘ಬಿಗ್ ಬಾಸ್’ ಸ್ಪರ್ಧಿಯಾಗಿದ್ದ ಸಂತೋಷ್ ಅವರನ್ನು ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಹಿನ್ನಲೆಯಲ್ಲಿ ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು.