ಮುಂಬೈ: ಬಾಲಿವುಡ್ ನಟ ಧರ್ಮೇಂದ್ರ(86) ಅವರನ್ನು ಈ ವಾರದ ಆರಂಭದಲ್ಲಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಧರ್ಮೇಂದ್ರ ಅವರಿಗೆ ಬೆನ್ನುನೋವು ಇದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ರಾತ್ರಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೀರ್ಘಕಾಲದವರೆಗೆ ನಟನೆಯಿಂದ ದೂರ ಉಳಿದಿದ್ದ ಧರ್ಮೇಂದ್ರ ಅವರು ಕರಣ್ ಜೋಹರ್ ಅವರ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಮೂಲಕ ಪುನರಾಗಮನ ಮಾಡಲಿದ್ದಾರೆ. ಆಲಿಯಾ ಭಟ್, ರಣ್ ವೀರ್ ಸಿಂಗ್, ಜಯಾ ಬಚ್ಚನ್ ಮತ್ತು ಶಬಾನಾ ಅಜ್ಮಿ ಕೂಡ ನಟಿಸಲಿದ್ದಾರೆ.