
ಬೆಂಗಳೂರು: ಹೃದಯಾಘಾತದಿಂದ ಹಿರಿಯ ನಟ ಲೋಹಿತಾಶ್ವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಪೊಲೊ ಆಸ್ಪತ್ರೆಗೆ ಲೋಹಿತಾಶ್ವ ಅವರನ್ನು ದಾಖಲಿಸಲಾಗಿದೆ.
ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ. ನಿನ್ನೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಕುಟುಂಬದವರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಾಗರ್ ಅಪೊಲೊ ಆಸ್ಪತ್ರೆಯ ಐಸಿಯುನಲ್ಲಿ ಲೋಹಿತಾಶ್ವ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ಲೋಹಿತಾಶ್ವ ಅಭಿನಯಿಸಿದ್ದಾರೆ. ನಿವೃತ್ತ ಪ್ರಾಧ್ಯಾಪಕರು, ನಾಟಕಕಾರರು ಆಗಿರುವ ಲೋಹಿತಾಶ್ವ 500 ಕ್ಕೂ ಅಧಿಕ ಚಿತ್ರಗಳು, ದೂರದರ್ಶನ ಧಾರವಾಹಿ, ನಾಟಕಗಳಲ್ಲಿ ಅಭಿನಯಿಸಿದ್ದಾರೆ.