alex Certify BIG NEWS: ಮತ್ತೊಬ್ಬ ನಟಿ ಆತ್ಮಹತ್ಯೆಗೆ ಯತ್ನ – ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಬ್ಬ ನಟಿ ಆತ್ಮಹತ್ಯೆಗೆ ಯತ್ನ – ವಿಡಿಯೋ ವೈರಲ್

ನಟಿ ಜಯಶ್ರೀ ಸಾವಿನ ಬಗ್ಗೆ ಮಾತಾಡಿದ್ದು, ಭಾರೀ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ನಟಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೈವ್ ವಿಡಿಯೋ ಮಾಡಿದ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ನೇಹಿತರು, ಮತ್ತು ಕುಟುಂಬದವರು ಆಸ್ಪತ್ರೆಗೆ ಸೇರಿಸಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ನಟ ಸೀಮನ್, ರಾಜಕಾರಣಿ ಸೇರಿದಂತೆ ಹಲವರು ನನಗೆ ಬದುಕಲು ಬಿಡುತ್ತಿಲ್ಲ. ನನ್ನ ಸಾವಿಗೆ ಕಾರಣರಾದ ಅವರನ್ನು ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಹೇಳಿದ ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಈ ಬಗ್ಗೆ ಗಮನಕ್ಕೆ ಬರುತ್ತಲೇ ಕುಟುಂಬದವರು, ಸ್ನೇಹಿತರು, ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವಿಜಯಲಕ್ಷ್ಮಿ ಈ ಹಿಂದೆ ಸಂಕಷ್ಟದ ಸಂದರ್ಭದಲ್ಲಿ ನೆರವಾದ ನಟನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಇದಾದ ನಂತರದಲ್ಲಿ ವಿಜಯಲಕ್ಷ್ಮಿ ಸಹೋದರಿ ಉಷಾದೇವಿ ನಟನ ಬಳಿ ಕ್ಷಮೆ ಕೋರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...