alex Certify ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’ ಫಸ್ಟ್ ಡೇ ಕಲೆಕ್ಷನ್ ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ದಾಖಲೆ ಬರೆದ ಸುದೀಪ್ ‘ವಿಕ್ರಾಂತ್ ರೋಣ’ ಫಸ್ಟ್ ಡೇ ಕಲೆಕ್ಷನ್ ಎಷ್ಟು ಗೊತ್ತಾ…?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದೆ.

ಬಿಡುಗಡೆಯಾದಲ್ಲೆಲ್ಲಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ‘ವಿಕ್ರಾಂತ್ ರೋಣ’ ಮೊದಲ ದಿನ ಭಾರತದಲ್ಲಿ ಸುಮಾರು 45 ಕೋಟಿ ರೂ. ಕಲೆಕ್ಷನ್ ಮಾಡಿದೆ. ಅನುಪ್ ಭಂಡಾರಿ ನಿರ್ದೇಶನದ ಚಿತ್ರವು ಭಾರತದಲ್ಲಿ ಮೊದಲ ದಿನವೇ 40-45 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ, ವಿಶ್ವದಾದ್ಯಂತ ಬಾಕ್ಸ್ ಆಫೀಸ್‌  ಕಲೆಕ್ಷನ್ 50 ಕೋಟಿ ರೂಪಾಯಿಗಳ ಗಡಿಯನ್ನು ದಾಟಿದೆ ಎಂದು ಹೇಳಲಾಗಿದೆ.

ಕನ್ನಡ, ಹಿಂದಿ ಮಾತ್ರವಲ್ಲದೇ ಅನೇಕ ದೇಶಿ, ವಿದೇಶಿ ಭಾಷೆಗಳಲ್ಲಿಯೂ ‘ವಿಕ್ರಾಂತ್ ರೋಣ’ ಬಿಡುಗಡೆಯಾಗಿದೆ ಬೃಹತ್ ಬಜೆಟ್‌ ನಲ್ಲಿ ನಿರ್ಮಿಸಲಾದ ‘ವಿಕ್ರಾಂತ್ ರೋಣ’ ಡಾರ್ಕ್ 3-ಡಿ ಅನುಭವದೊಂದಿಗೆ ಪ್ರಪಂಚದಾದ್ಯಂತ 14 ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಮುಂಗಡ ಬುಕಿಂಗ್‌ನಿಂದ ಸುಮಾರು 7-9 ಕೋಟಿ ರೂಪಾಯಿಗಳನ್ನು ಗಳಿಸಿದೆ. ಅದರಲ್ಲಿ ಹೆಚ್ಚಿನ ಮೊತ್ತ ಕನ್ನಡ ಭಾಷೆಯ ಆವೃತ್ತಿಯ ಬುಕಿಂಗ್‌ ನಿಂದ ಬಂದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...