alex Certify ಅನುಷ್ಕಾಗೆ ಹುಟ್ಟುಹಬ್ಬದ ಶುಭ ಕೋರಿದ ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನುಷ್ಕಾಗೆ ಹುಟ್ಟುಹಬ್ಬದ ಶುಭ ಕೋರಿದ ವಿರಾಟ್ ಕೊಹ್ಲಿ

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾಗೆ ಹುಟ್ಟುಹಬ್ಬದ ಸಂಭ್ರಮ. ಅನುಷ್ಕಾ ಶರ್ಮಾ ಮೇ 1 ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಪತ್ನಿ ಅನುಷ್ಕಾ ಶರ್ಮಾಗೆ ಶುಭ ಕೋರಿದ ಕೊಹ್ಲಿ, ಭಾವನಾತ್ಮಕ ಫೋಸ್ಟ್ ಹಾಕಿದ್ದಾರೆ.

ನನ್ನ ಪ್ರೀತಿ, ನನ್ನ ಜೀವನದಲ್ಲಿ ಬೆಳಕು ತಂದಿರುವೆ. ನನ್ನ ಜೀವನವನ್ನು ಪ್ರತಿದಿನ ಬೆಳಗಿದ್ದೀಯಾ. ನಾನು ನಿನ್ನ ತುಂಬಾ ಪ್ರೀತಿಸುತ್ತೇನೆ ಎಂದು ಬರೆದಿರುವ ಕೊಹ್ಲಿ ಫೋಟೋ ಹಂಚಿಕೊಂಡಿದ್ದಾರೆ. ಕೊಹ್ಲಿ ಈ ಫೋಟೋ ವೈರಲ್ ಆಗಿದೆ.

ಚಿತ್ರದಲ್ಲಿ ಅನುಷ್ಕಾ ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡರೆ, ವಿರಾಟ್ ಕೊಹ್ಲಿ ಕಪ್ಪು ಟೀ ಶರ್ಟ್ ಮತ್ತು ಖಾಕಿ ಬಣ್ಣದ ಪ್ಯಾಂಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಈ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...