ಬೆಂಗಳೂರಿನಲ್ಲಿ ನಟ ದಿ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣುವರ್ಧನ್ ಅಭಿಮಾನಿಗಳು ಚಿಕ್ಕಬಳ್ಳಾಪುರದಲ್ಲಿ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿದ್ದಾರೆ.
ಆದಿಚುಂಚನಗಿರಿ ಮಠದಲ್ಲಿ ಭೇಟಿಯಾಗಿ ಚರ್ಚಿಸಿ ಮೊದಲಿದ್ದ ಜಾಗದಲ್ಲಿ ವಿಷ್ಣು ಪ್ರತಿಮೆ ಸ್ಥಾಪನೆಗೆ ಮನವಿ ಮಾಡಿದ್ದು, ಇದಕ್ಕೆ ಸ್ವಾಮೀಜಿ ಒಪ್ಪಿಗೆ ನೀಡಿದ್ದಾರೆ. ನಾಳೆಯೇ ವಿಷ್ಣು ಪ್ರತಿಮೆ ಮರುಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಲಾಗುತ್ತದೆ. ಡಿಸೆಂಬರ್ 30 ರಂದು ವಿಷ್ಣುವರ್ಧನ್ ಪ್ರತಿಮೆ ಮರು ಸ್ಥಾಪನೆ ಮಾಡಲಾಗುತ್ತದೆ. ಅವತ್ತು ವಿಷ್ಣುವರ್ಧನ್ ಪುಣ್ಯಸ್ಮರಣೆ ಇರುತ್ತದೆ. ಹಾಗಾಗಿ, 3 ದಿನದಲ್ಲಿ ಪ್ರತಿಮೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ. ಸಚಿವ ವಿ. ಸೋಮಣ್ಣ ಮತ್ತು ಶ್ರೀಗಳ ನೇತೃತ್ವದಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ವಿಷ್ಣು ಪ್ರತಿಮೆ ಧ್ವಂಸಗೊಳಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳ ಕೃತ್ಯವನ್ನು ಕಲಾವಿದರು, ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದರು.