
ಮೈಸೂರು: ನಟ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಬೆನ್ನಲ್ಲೇ ಅಸಮಾಧಾನ ಭಗಿಲೆದ್ದಿದೆ. ಸ್ಮಾರಕದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಿಲ್ಲವೆಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ತಾಲೂಕಿನ ಹಾಲಾಳು ಬಳಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೆ ಅದ್ದೂರಿ ಉದ್ಘಾಟನೆ ಕಾರ್ಯಕ್ರಮ ನಡೆದಿತ್ತು. ನಿನ್ನೆ ಸಂಜೆ ವಿಷ್ಣು ಸ್ಮಾರಕ ವೀಕ್ಷಣೆಗೆ ಬಂದ ಅಭಿಮಾನಿಗಳಿಗೆ ನಿರಾಸೆಯಾಗಿದೆ.
ಕತ್ತಲಿದ್ದ ಕಾರಣ ಸ್ಮಾರಕ ವೀಕ್ಷಿಸದೇ ಅಭಿಮಾನಿಗಳು ಹಿಂದಿರುಗಿದ್ದಾರೆ. ಕಾಟಾಚಾರಕ್ಕೆ ಸ್ಮಾರಕ ಉದ್ಘಾಟಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು. ಲೈಟಿಂಗ್ ವ್ಯವಸ್ಥೆ ಸೇರಿದಂತೆ ಸಕಲ ಸೌಲಭ್ಯ ಕಲ್ಪಿಸಲು ಒತ್ತಾಯಿಸಲಾಗಿದೆ.