ಪಾಟ್ನಾ: ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ಬಾಂದ್ರಾ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಅವರ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರನ್ನು ಕೊಲೆ ಮಾಡಿರುವುದಾಗಿ ಸೋದರಮಾವ ಆರೋಪಿಸಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಶಾಂತ್ ಸಿಂಗ್ ಸೋದರಮಾವ, ಸುಶಾಂತ್ ಸಾವು ಆತ್ಮಹತ್ಯೆ ಎಂದು ಅನಿಸುತ್ತಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸಿದರೆ ಸಾವಿನ ಪಿತೂರಿ, ಸಂಚು ಗೊತ್ತಾಗುತ್ತದೆ. ಆತನನ್ನು ಕೊಲೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ಕುರಿತಾಗಿ ಈಗಾಗಲೇ ಮುಂಬೈ ಪೊಲೀಸರು ತನಿಖೆ ಕೈಗೊಂಡಿದ್ದು ಹಲವರ ವಿಚಾರಣೆ ನಡೆಸಿ ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.